Select Your Language

Notifications

webdunia
webdunia
webdunia
webdunia

ಬಹುಮತವಿಲ್ಲದಿದ್ದರೂ ಗೋವಾದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು

ಬಹುಮತವಿಲ್ಲದಿದ್ದರೂ ಗೋವಾದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು
NewDelhi , ಭಾನುವಾರ, 12 ಮಾರ್ಚ್ 2017 (18:14 IST)
ನವದೆಹಲಿ: ಗೋವಾ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಸೋಲನುಭವಿಸಿದರೂ, ಅಧಿಕಾರಕ್ಕೇರಲು ಸಕಲ ಪ್ರಯತ್ನ ನಡೆಸುತ್ತಿದೆ.

 
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 13 ಸ್ಥಾನಗಳು ಲಭಿಸಿದೆ. ಆದರೆ ಕಾಂಗ್ರೆಸ್ 17 ಸ್ಥಾನ ಗಳಿಸಿ ಮೊದಲ ಸ್ಥಾನದಲ್ಲಿದೆ. ಹಾಗಿದ್ದರೂ ಎರಡೂ ಪಕ್ಷಗಳಿಗೆ ಸರ್ಕಾರ ರಚನೆಗೆ ಬೇಕಾದಷ್ಟು ಬಹುಮತವಿಲ್ಲ.

ಹೀಗಾಗಿ ಪರಿಸ್ಥಿತಿಯ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ. ಪಕ್ಷೇತರ 10 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಲು ಗೋವಾ ಬಿಜೆಪಿ ಕಸರತ್ತು ನಡೆಸಿದೆ. ಇದಕ್ಕಾಗಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಸಭೆ ನಡೆಸಿವೆ. ಮಣಿಪುರದಲ್ಲೂ ಕಾಂಗ್ರೆಸ್ ಗಿಂತ ಕೇವಲ 7 ಸ್ಥಾನ ಕಡಿಮೆ ಹೊಂದಿರುವ ಬಿಜೆಪಿ ಪಕ್ಷೇತರ 10 ಶಾಸಕರ ನೆರವಿನಿಂದ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ. ಆ ಮೂಲಕ ಕಾಂಗ್ರೆಸ್ ನ್ನು ಅಧಿಕಾರದಿಂದ ದೂರವಿಡಲು ಸಕಲ ಪ್ರಯತ್ನ ನಡೆಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಕಾಂಗ್ರೆಸ್ ನ ಪಿ.ಚಿದಂಬರ್ ಶಹಬ್ಬಾಶ್!