Webdunia - Bharat's app for daily news and videos

Install App

ಉ.ಪ್ರದೇಶದಲ್ಲಿ ಬಿಜೆಪಿಯಿಂದ ಉತ್ತಮ ಅಡಳಿತ: ರಾಜನಾಥ್‌ ಸಿಂಗ್ ಭರವಸೆ

Webdunia
ಭಾನುವಾರ, 25 ಡಿಸೆಂಬರ್ 2016 (11:52 IST)
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬಂದಲ್ಲಿ ಉತ್ತಮ ಅಡಳಿತ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
 
ಸಮಾಜವಾದಿ ಪಕ್ಷ ಮತ್ತು ಬಹಜನ ಸಮಾಜ ಪಕ್ಷಗಳು ರಾಜ್ಯವನ್ನು ಅಧೋಗತಿಗೆ ತಳ್ಳಿವೆ. ಅಭಿವೃದ್ಧಿಯಲ್ಲಿ ರಾಜ್ಯ ತೀರಾ ಹಿಂದುಳಿಯುವಂತೆ ಮಾಡಿವೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
 
ಕಳೆದ ನವೆಂಬರ್ 5 ರಂದು ಆರಂಭವಾಗಿದ್ದ ಬಿಜೆಪಿಯ ಪರಿವರ್ತನಾ ದಿವಸ್ ಯಾತ್ರೆಯ ಅಂತಿಮ ದಿನದಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿಂಗ್ ಮಾತನಾಡಿದ ಅವರು, ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ ಎಂದರು.
 
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಅಧಿಕಾರದಲ್ಲಿದೆ. ಫೆಬ್ರವರಿ ತಿಂಗಳಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಗೆ ರಾಜ್ಯದ ಜನತೆ ಉತ್ತಮವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಜನತೆಯ ವಿಶ್ವಾಸಕ್ಕೆ ಧಕ್ಕೆ ತರದಂತೆ ಬಿಜೆಪಿ ನಡೆದುಕೊಳ್ಳಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ
Show comments