ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಅಮಿತ್ ಶಾ

Webdunia
ಗುರುವಾರ, 13 ಏಪ್ರಿಲ್ 2023 (09:00 IST)
ದಿಸ್ಪುರ್ : ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಅಸ್ಸಾಂನ ದಿಬ್ರುಗಢದಲ್ಲಿ ಬಿಜೆಪಿ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಈಶಾನ್ಯ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ. ಅಲ್ಲದೇ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು. 

ಈಶಾನ್ಯವನ್ನು ಒಂದು ಕಾಲದಲ್ಲಿ ಕಾಂಗ್ರೆಸ್ನ ಕೋಟೆ ಎಂದು ಪರಿಗಣಿಸಲಾಗಿತ್ತು. ಆದರೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಹೊರತಾಗಿಯೂ ಪಕ್ಷವು ಮೂರು ರಾಜ್ಯಗಳಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ.

ಇತ್ತೀಚಿಗಷ್ಟೇ ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ತ್ರಿಪುರಾದಲ್ಲಿ ಬಿಜೆಪಿ ಸರ್ಕಾರ ಗೆದ್ದು ಇತರ ಎರಡು ರಾಜ್ಯಗಳಲ್ಲಿ ಮೈತ್ರಿ ಪಾಲುದಾರರಾಗಿ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments