Webdunia - Bharat's app for daily news and videos

Install App

ಉತ್ತರಪ್ರದೇಶದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಖಚಿತ: ರಾಜನಾಥ್ ಸಿಂಗ್

Webdunia
ಮಂಗಳವಾರ, 24 ಮೇ 2016 (16:55 IST)
ಆಸ್ಸಾಂ ವಿಧಾನಸಭೆ ಚುನಾವಣೆ ನಂತರ ಗೆಲುವಿನ ನಾಗಾಲೋಟದಲ್ಲಿ ಓಡುತ್ತಿರುವ ಬಿಜೆಪಿ, ಉತ್ತರಪ್ರದೇಶ ಚುನಾವಣೆಯಲ್ಲೂ ಬಹುಮತ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದೆ. 
 
ಆಸ್ಸಾಂ ಗೆಲವನ್ನು ಬಣ್ಣಿಸಿದ ಕೇಂದ್ರ ಗೃಹ ಸಚಿವ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ರಾಜನಾಥ್ ಸಿಂಗ್, ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಆದಾಗ್ಯೂ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಕೆಲ ಪ್ರದೇಶಗಳಲ್ಲಿ ತೀವ್ರ ಪೈಪೋಟಿ ನೀಡಲಿವೆ. ಆದರೆ, ಬಿಜೆಪಿಗೆ ಬಹುಮತ ದೊರೆಯುವುದು ಖಚಿತ ಎಂದಿದ್ದಾರೆ.
 
ಅಸ್ಸಾಂ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದಂತೆ, ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಬಗ್ಗೆ ಬಿಜೆಪಿ ಸಂಸದೀಯ ಮಂಡಳಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿರುವ ಸಣ್ಣ ಸಮುದಾಯವಾಗಲಿ ಅಥವಾ ದೊಡ್ಡ ಸಮುದಾಯವಾಗಲಿ ಪ್ರತಿಯೊಂದು ಸಮುದಾಯದವರು ಬಿಜೆಪಿಗೆ ಮತಹಾಕಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗಮನಾರ್ಹ ವಿಷಯವೆಂದರೆ, ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರವನ್ನು ಸೋಲಿಸಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ.

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments