ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವು ಪಕ್ಕಾ; ಲಡ್ಡು ರೆಡಿ ಮಾಡಿದ ಬಿಜೆಪಿ ಮುಖಂಡರು

ಗುರುವಾರ, 24 ಅಕ್ಟೋಬರ್ 2019 (11:11 IST)
ಮುಂಬೈ : ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನ ಸಭಾ ಚುನಾವಣೆಯ ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಫಲಿತಾಂಶಕ್ಕೂ ಮೊದಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದಾಗಿ ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಮುಖಂಡರು ಸಂಭ್ರಾಮಾಚರಣೆಗೆ ಸಕಲ ಸಿದ್ಧತೆ ನಡೆಸುತ್ತಿದ್ದು, ಅದಕ್ಕಾಗಿ 5 ಸಾವಿರಕ್ಕೂ ಅಧಿಕ ಲಡ್ಡುಗಳು ಹಾಗೂ ಹೂವಿನ ಮಾಲೆಗಳನ್ನು ತಯಾರಿಸುತ್ತಿದ್ದಾರೆ. ಅಲ್ಲದೇ ಮುಂಬೈ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ದೊಡ್ಡ ಸ್ಕ್ರೀನ್ ಅಳವಡಿಸಿ ಕಾರ್ಯಕರ್ತರು ಹಾಗೂ ಮುಖಂಡರಿಗೆ ಫಲಿತಾಂಶ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.


ಅಲ್ಲದೇ ಈ ಬಾರಿಯೂ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸದಿಂದ ಜನರಿಗೆ ಸಿಹಿ ಹಂಚಲು ಕಾರ್ಯಕರ್ತರು ಹಾಗೂ ಮುಖಂಡರು ನಿರ್ಧರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಯಾರು ನನಗೆ ಸಿಎಂ ಸ್ಥಾನ ನೀಡುತ್ತಾರೋ ಅವರಿಗೆ ಬೆಂಬಲ ನೀಡುವೆ- ದುಶ್ಯಂತ್ ಚೌಟಾಲ್