Select Your Language

Notifications

webdunia
webdunia
webdunia
webdunia

ಕೇರಳದ ಬಿಜೆಪಿ ಕಾರ್ಯಕರ್ತನ ಹತ್ಯೆ: ನಾಳೆ ಕೇರಳ ಬಂದ್‌ಗೆ ಬಿಜೆಪಿ ಕರೆ

ಕೇರಳದ ಬಿಜೆಪಿ ಕಾರ್ಯಕರ್ತನ ಹತ್ಯೆ: ನಾಳೆ ಕೇರಳ ಬಂದ್‌ಗೆ ಬಿಜೆಪಿ ಕರೆ
ಕಣ್ಣೂರು , ಬುಧವಾರ, 12 ಅಕ್ಟೋಬರ್ 2016 (16:39 IST)
ಸಿಪಿಐ(ಎಂ) ಕಾರ್ಯಕರ್ತನ ಹತ್ಯೆಯಾದ ಕೇವಲ ಎರಡು ದಿನಗಳಲ್ಲಿಯೇ 25 ವರ್ಷ ವಯಸ್ಸಿನ ಬಿಜೆಪಿ ಕಾರ್ಯಕರ್ತನನ್ನು ಇಂದು ಹಾಡಹಗಲೇ ಹತ್ಯೆ ಮಾಡಲಾಗಿದೆ.
 
ಇಂದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಪಿನರಾಯಿ ಗ್ರಾಮದಲ್ಲಿರುವ ಪೆಟ್ರೋಲ್ ಪಂಪ್ ಬಳಿ ಬಿಜೆಪಿ ಕಾರ್ಯಕರ್ತ ರಾಮಿತ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ಬಿಜೆಪಿ ನಾಳೆ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮುಖಂಡರ ಮೇಲೆ ನಿರಂತರ ಹಲ್ಲೆಗೊಳಗಾಗುತ್ತಿವೆ ಎಂದು ಬಿಜೆಪಿ ಮುಖಂಡರು ಕಿಡಿಕಾರಿದ್ದಾರೆ.
 
ಹತ್ಯೆಯಾದ ವ್ಯಕ್ತಿ ರಮಿತ್‌ನ ತಲೆ ಮತ್ತು ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮುನ್ನವೇ ಸಾವನ್ನಪ್ಪಿದ್ದಾನೆ ಎಂದು ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಸ್ವಂತ ಕ್ಷೇತ್ರವಾದ ಪಿನರಾಯಿ ಗ್ರಾಮದಲ್ಲಿ ಕಳೆದ 2002 ರಲ್ಲಿ ಹತ್ಯೆಯಾದ ಯುವಕನ ತಂದೆಯನ್ನು ಕೂಡಾ ಸಿಪಿಐ(ಎಂ) ಕಾರ್ಯಕರ್ತರು ಹತ್ಯೆ ಮಾಡಿದ್ದರು.
 
ಕಣ್ಣೂರ್‌ನಲ್ಲಿ ರಾಜಕೀಯ ಕಾರ್ಯಕರ್ತರ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿರುವುದು ಆಘಾತ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಅಬು ಧಾಬಿಯಲ್ಲಿ ನಿರ್ಮಾಣವಾಗುತ್ತಿದೆ ಮೊದಲ ಹಿಂದೂ ದೇವಸ್ಥಾನ