ಮುಂದಿನ ವರ್ಷದಲ್ಲಿ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮಥುರಾ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಉತ್ತರಪ್ರದೇಶ ಸರಕಾರದ ವೈಫಲ್ಯತೆಯನ್ನು ತೋರಿಸುತ್ತದೆ. ಇಂತಹ ಘಟನೆಗಳನ್ನು ತಡೆಯುವುದು ಸರಕಾರದ ಆದ್ಯ ಕರ್ತವ್ಯವಾಗಿದೆ ಎಂದು ಕಿಡಿಕಾರಿದ್ದಾರೆ.
ಸರಕಾರ ಮತ್ತು ಬಡವರಿಗಾಗಿ ಮೀಸಲಾಗಿರುವ ಭೂಮಿಯನ್ನು ಯಾರಾದರೂ ಕಬಳಿಸಲು ಯತ್ನಿಸಿದಲ್ಲಿ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ಮಥುರಾ ಘಟನೆ ದೇಶದಲ್ಲಿಯೇ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ಹತ್ಯೆಯಾಗಿದ್ದಾರೆ. ಆದಾಗ್ಯೂ ಸರಕಾರ ಕ್ಯಾರೆ ಎನ್ನುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.