Webdunia - Bharat's app for daily news and videos

Install App

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

Sampriya
ಸೋಮವಾರ, 30 ಜೂನ್ 2025 (14:15 IST)
Photo Credit X
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 10 ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂಬ ಶಂಕೆಗಳು ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿದೆ.

ತೆಲಂಗಾಣದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘಟನೆಗೆ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments