ಪಾಟ್ನಾ : ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಮಾಹಿತಿ ಪ್ರಸಾರ ಮಾಡುವ ಉದ್ದೇಶದಿಂದ ಟಿವಿ ಸ್ಕ್ರೀನ್ಗಳನ್ನ ಅಳವಡಿಸಿರುತ್ತಾರೆ. ಹಾಗೆಯೇ ಪಾಟ್ನಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ರೈಲು ಸಂಚಾರದ ಮಾಹಿತಿ ನೀಡುವ ಉದ್ದೇಶದಿಂದ ಹಾಕಿದ್ದ ಟಿವಿ ಪರದೆಯ ಮೇಲೆ ʻನೀಲಿ ಚಿತ್ರʼ ಪ್ರಸಾರವಾಗಿರುವುದು ಕಂಡುಬಂದಿದೆ.
ಸುಮಾರು 3 ನಿಮಿಷಯಗಳ ಕಾಲ ನೀಲಿಚಿತ್ರ ಪ್ರಸಾರವಾಗಿದ್ದು, ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ರೈಲ್ವೆ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಹಿಳಾ ಪ್ರಯಾಣಿಕರು ಮುಜುಗರ ಅನುಭವಿಸುವಂತಾಗಿದೆ. ಕೆಲವರು ಇದನ್ನು ವೀಡಿಯೋ ಮಾಡಿಕೊಂಡಿದ್ದು, ತಮ್ಮ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಈ ಕುರಿತಾಗಿ ತನಿಖೆ ನಡೆಸಿದ ಪೊಲೀಸರು, ಕೋಲ್ಕತ್ತಾ ಮೂಲದ ಏಜೆನ್ಸಿಯೊಂದಕ್ಕೆ ಟಿವಿಗಳ ನಿರ್ವಹಣೆ ಗುತ್ತಿಗೆ ನೀಡಿರೋದನ್ನು ಖಚಿತಪಡಿಸಿಕೊಂಡು ಆ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ರೈಲ್ವೆ ಇಲಾಖೆಯು ಖಾಸಗಿ ಸಂಸ್ಥೆಗೆ ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಿದೆ. ಖಾಸಗಿ ಏಜೆನ್ಸಿಯ ಹಲವರನ್ನು ವಶಕ್ಕೆ ಪಡೆದಿದ್ದು, ಆ ಸಮಯದಲ್ಲಿ ಇದ್ದ ಟಿವಿ ಆಪರೇಟರ್ಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.