Select Your Language

Notifications

webdunia
webdunia
webdunia
webdunia

ದೆಹಲಿ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ದೆಹಲಿ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಬೆಂಗಳೂರು , ಶನಿವಾರ, 5 ಸೆಪ್ಟಂಬರ್ 2015 (11:12 IST)
ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಣಾಮ ಹಲವು ವಿಮಾನಗಳು ವಿಳಂಬವಾಗಿ ಹಾರಿದವು.
 
ಶುಕ್ರವಾರ- ಶನಿವಾರದ ಮಧ್ಯರಾತ್ರಿ ಕರೆ ಮಾಡಿದ ದುಷ್ಕರ್ಮಿಗಳು 6 ಅಂತರಾಷ್ಟ್ರೀಯ ವಿಮಾನಗಳಲ್ಲಿ ಬಾಂಬ್ ಸ್ಪೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದರು. 
 
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಶುಕ್ರವಾರ ಮಧ್ಯರಾತ್ರಿ 1.30ರ ಸುಮಾರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಏರ್ ಅರೇಬಿಯಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಹಾಕಿದ್ದ. ಈ ವಿಮಾನದಲ್ಲಿ ಸುಮಾರು 350 ಜನರು ಹಜ್ ಯಾತ್ರೆಗೆ ತೆರಳುತ್ತಿದ್ದರು. ವಿಮಾನ ಮತ್ತು ವಿಮಾನ ನಿಲ್ದಾಣದ ತಪಾಸಣೆ ನಡೆಸಿದ ಇದು ಹುಸಿ ಕರೆ ಎಂಬುದು ಖಚಿತವಾಯಿತು. ಬಳಿಕ 5.30 ಕ್ಕೆ ವಿಮಾನ ಪ್ರಯಾಣ ಬೆಳೆಸಿತು ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.  
 
ಇದೇ ಸಂದರ್ಭದಲ್ಲಿ ದೆಹಲಿ ವಿಮಾನ ನಿಲ್ದಾಣಕ್ಕೂ ಸಹ ಹುಸಿ ಬಾಂಬ್ ಕರೆ ಬಂದಿದ್ದರಿಂದ ತಪಾಸಣೆ ಬಳಿಕ ವಿಮಾನ ಹಾರಾಟಕ್ಕೆ ಅನುವು ಮಾಡಿಕೊಡಲಾಯಿತು. 

Share this Story:

Follow Webdunia kannada