Publish Date: Sun, 31 Dec 2023 (12:05 IST)
Updated Date: Sun, 31 Dec 2023 (12:09 IST)
ಮುಂಬೈ: ಇಂದು ಮಧ್ಯರಾತ್ರಿ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಸಿದ್ಧತೆ ನಡೆಸಿರುವ ಮುಂಬೈ ಜನತೆಗೆ ಶಾಕ್ ಎದುರಾಗಿದೆ.
ಮುಂಬೈಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಬಾಂಬ್ ಸ್ಪೋಟ ನಡೆಸುವುದಾಗಿ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಬಂದಿದೆ. ಈ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಿನ್ನೆ ಸಂಜೆ ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಈ ಹಿನ್ನಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನಗಣ್ಣಿರಿಸಿದ್ದಾರೆ. ಹೊಸ ವರ್ಷಾಚರಣೆಗಾಗಿ ಜನ ಸೇರುವ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಪೊಲೀಸರು ಎಲ್ಲೆಡೆ ತಪಾಸಣೆ ನಡೆಸಿದ್ದಾರೆ. ಆದರೆ ಇದುವರೆಗೆ ಯಾವುದೇ ಸಂಶಯಾಸ್ಪದ ವಸ್ತು ಕಂಡುಬಂದಿಲ್ಲ. ಇದೀಗ ಪೊಲೀಸರು ಕರೆ ಮಾಡಿದ ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ.