Select Your Language

Notifications

webdunia
webdunia
webdunia
webdunia

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ
dehali , ಸೋಮವಾರ, 1 ಜನವರಿ 2024 (20:42 IST)
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ, ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ.

ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್​ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ. ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ