ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಎರಡು ಕಾಲೇಜುಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಉತ್ತರ ಕ್ಯಾಂಪಸ್‌ನಲ್ಲಿರುವ ರಾಮಜಾಸ್ ಕಾಲೇಜು ಮತ್ತು ಕಲ್ಕಾಜಿಯ ದೇಶ ಬಂಧು ಕಾಲೇಜಿಗೆ ಬೆದರಿಕೆ ಕಳುಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಮತ್ತು ದೆಹಲಿ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದರು. ದೆಹಲಿ ಪೊಲೀಸರ ಪ್ರಕಾರ ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ನಾಳೆ ರಷ್ಯಾ ಅಧ್ಯಕ್ಷ ವಾಡ್ಲಿಯರ್ ಪುಟಿನ್ ಅವರು ಭಾರತಕ್ಕೆ ಭೇಟಿ ಹಿನ್ನೆಲೆ ನಗರದಾದ್ಯಂತ ಬಿಗಿ ಬಂದೋಬಸ್ತ್‌ನ್ನು ಆಯೋಜಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಂಬ್ ಬೆದರಿಕೆ ಬಂದಿರುವುದು ಆತಂಕ ಮೂಡಿಸಿದೆ.
ದೆಹಲಿಯ ಚಾಣಕ್ಯಪುರಿಯಲ್ಲಿರುವ ಖಾಸಗಿ ಶಾಲೆಗೆ ಕಳೆದ ತಿಂಗಳು ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಸಂಪೂರ್ಣ ಶೋಧದ ನಂತರ, ದೆಹಲಿ ಪೊಲೀಸ್ ಅಧಿಕಾರಿಗಳು ಅಧಿಕೃತ ಹೇಳಿಕೆಯ ಪ್ರಕಾರ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದಿದ್ದರು.