ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

Sampriya
ಬುಧವಾರ, 3 ಡಿಸೆಂಬರ್ 2025 (12:41 IST)
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಎರಡು ಕಾಲೇಜುಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. 

ಉತ್ತರ ಕ್ಯಾಂಪಸ್‌ನಲ್ಲಿರುವ ರಾಮಜಾಸ್ ಕಾಲೇಜು ಮತ್ತು ಕಲ್ಕಾಜಿಯ ದೇಶ ಬಂಧು ಕಾಲೇಜಿಗೆ ಬೆದರಿಕೆ ಕಳುಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಮತ್ತು ದೆಹಲಿ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದರು. ದೆಹಲಿ ಪೊಲೀಸರ ಪ್ರಕಾರ ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ನಾಳೆ ರಷ್ಯಾ ಅಧ್ಯಕ್ಷ ವಾಡ್ಲಿಯರ್ ಪುಟಿನ್ ಅವರು ಭಾರತಕ್ಕೆ ಭೇಟಿ ಹಿನ್ನೆಲೆ ನಗರದಾದ್ಯಂತ ಬಿಗಿ ಬಂದೋಬಸ್ತ್‌ನ್ನು ಆಯೋಜಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಂಬ್‌ ಬೆದರಿಕೆ ಬಂದಿರುವುದು ಆತಂಕ ಮೂಡಿಸಿದೆ. 

ದೆಹಲಿಯ ಚಾಣಕ್ಯಪುರಿಯಲ್ಲಿರುವ ಖಾಸಗಿ ಶಾಲೆಗೆ ಕಳೆದ ತಿಂಗಳು ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಸಂಪೂರ್ಣ ಶೋಧದ ನಂತರ, ದೆಹಲಿ ಪೊಲೀಸ್ ಅಧಿಕಾರಿಗಳು ಅಧಿಕೃತ ಹೇಳಿಕೆಯ ಪ್ರಕಾರ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments