Webdunia - Bharat's app for daily news and videos

Install App

ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Webdunia
ಗುರುವಾರ, 26 ಆಗಸ್ಟ್ 2021 (10:40 IST)
ನವದೆಹಲಿ/ಬೆಂಗಳೂರು: ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ ಮೂಲಕ ತಮಗೆ ಮತ್ತೆ ಸಂಪುಟದಲ್ಲಿ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಿಟ್ಟುಕೊಂಡಿದ್ದ ಸಚಿವಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ನಿರಾಸೆಯನ್ನುಂಟು ಮಾಡಿದ್ದಾರೆ.

ಬುಧವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮುಂದಿನ ವಾರ ಬರಲು ಹೇಳಿರುವುದಾಗಿ ತಿಳಿಸಿದರು.
ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಈಗಲೆ ಹೇಳಲು ಸಾಧ್ಯವಿಲ್ಲ. ಮುಂದಿನ ವಾರ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳುವ ಮೂಲಕ ಮಂತ್ರಿಮಂಡಲದಲ್ಲಿ ಅವಕಾಶಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದವರಿಗೆ ನಿರಾಸೆ ಮೂಡಿಸಿದರು.
ತದನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ, ರಾಜ್ಯದ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments