ಬೆಂಗಳೂರು,ಸೆ.13 : ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಅಹಮದಾಬಾದ್ನ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಅಹಮದಾಬಾದ್ಗೆ ಸಿಎಂ ಪ್ರಯಾಣ ಬೆಳೆಸುತ್ತಿದ್ದಾರೆ.
ನಂತರ ಮಧ್ಯಾಹ್ನ 12 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಗುಜರಾತಿನ ಅಹಮದಾಬಾದ್ ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ತೆರಳದ್ದಾರೆ. ಮಧ್ಯಾಹ್ನ 2.15 ಕ್ಕೆ ಗಾಂಧಿನಗರದಲ್ಲಿರುವ ರಾಜಭವನಕ್ಕೆ ತೆರಳಲಿದ್ದು, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಅಹಮದಾಬಾದ್ನಿಂದ ಹೊರಟು ಸಂಜೆ 5.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಲಿದ್ದು, ಸಂಜೆ 6.30ಕ್ಕೆ ಕ್ಯಾಪಿಟಲ್ ಹೋಟೆಲ್ನಲ್ಲಿ ನಡೆಯುವ ಬಿಜೆಪಿ ಶಾಸಕರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.