Publish Date: Fri, 14 Jan 2022 (17:09 IST)
Updated Date: Fri, 14 Jan 2022 (20:12 IST)
ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದುಕೊಂಡರು.
ನಂತರ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಮಾತನಾಡಿದ ರಾಜ್ಯಪಾಲರು, ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದೆ.
ದೆಹಲಿಯಲ್ಲಿ ಕೋವಿಡ್ ಲಸಿಕೆಯ ಎರಡು ಡೋಸ್ಗಳನ್ನೂ ಪಡೆದಿದ್ದೇನೆ. ಇಂದು ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಇಡೀ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ.
ರಾಜ್ಯದಲ್ಲಿ 4.89 ಕೋಟಿ ಜನರು ಮೊದಲ ಡೋಸ್, 3.98 ಕೋಟಿ ಜನರು ಎರಡನೇ ಡೋಸ್ ಪಡೆದಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.81.5 ಮಂದಿಗೆ ಎರಡೂ ಡೋಸ್ ನೀಡಲಾಗಿದೆ.