Publish Date: Fri, 02 Oct 2020 (10:36 IST)
Updated Date: Fri, 02 Oct 2020 (10:37 IST)
ಚೆನ್ನೈ : 17 ವರ್ಷದ ಹುಡುಗನೊಬ್ಬ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕತೆಗೆ ಕುರಿತಂತೆ ಚಾಟ್ ಮಾಡುವಂತೆ ಬೆದರಿಕೆ ಹಾಕಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಹುಡುಗ ಹುಡುಗಿಯನ್ನು ಇನ್ ಸ್ಟಾಗ್ರಾಂನಲ್ಲಿ ಫಾಲೋ ಮಾಡುತ್ತಿದ್ದು, ಆಕೆಯ ಬಳಿ ಚಾಟ್ ಮಾಡುವಂತೆ ಕೇಳಿದ್ದಾನೆ. ಇದಕ್ಕೆ ಹುಡುಗಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯ ಮಾರ್ಫಡ್ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಹುಡುಗನ ಕಿರುಕುಳದಿಂದ ಬೇಸತ್ತ ಹುಡುಗಿ ಸೈಬರ್ ಕ್ರೈಂಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ತನಿಖೆ ನಡೆಸಿ ಹುಡುಗನನ್ನು ಪತ್ತೆಹಚ್ಚಿ ಬಂಧಿಸಿ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.