Publish Date: Mon, 05 Oct 2020 (09:22 IST)
Updated Date: Mon, 05 Oct 2020 (09:25 IST)
ಪ್ರತಾಪ್ ಗರ್ : 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 22 ವರ್ಷದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಮನೆಯ ಬಳಿ ಆಟಾಡುತ್ತಿದ್ದಾಗ ಶೌಚಾಲಯಕ್ಕೆ ಬರುವಂತೆ ಕರೆದ ಯುವಕ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಾಗೇ ಯಾರಿಗಾದರೂ ತಿಳಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ. ಆದರೆ ಮರುದಿನ ಬಾಲಕಿಯ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮನೆಯವರಿಗೆ ಸತ್ಯಾಂಶ ತಿಳಿದುಬಂದಿದೆ.
ಬಾಲಕಿಯ ಕುಟುಂಬದವರು ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.