Publish Date: Thu, 18 Feb 2021 (07:33 IST)
Updated Date: Thu, 18 Feb 2021 (07:34 IST)
ಬರೇಲಿ : 15 ವರ್ಷದ ಹುಡುಗಿಯನ್ನು ಆಕೆಯ ಗೆಳೆಯ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬರೇಲಿಯ ನವಾಬ್ ಗಂಜ್ ಪ್ರದೇಶದಲ್ಲಿ ನಡೆದಿದೆ.
ಹುಡುಗಿ ಆರೋಪಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು. ಆದರೆ ಅವಳು ಬೇರೊಬ್ಬ ವ್ಯಕ್ತಿಯ ಜೊತೆ ಸಂಬಂಧದಲ್ಲಿರುವುದು ಯುವಕನಿಗೆ ತಿಳಿದಿದೆ. ಇದರಿಂದ ಕೋಪಗೊಂಡ ಆತ ಹುಡುಗಿ ತಾಯಿಯ ಜೊತೆ ಮಾರುಕಟ್ಟೆಗೆ ಹೋಗಿದ್ದಾಗ ಆಕೆಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿ ಹೊಲದಲ್ಲಿ ಎಸೆದಿದ್ದಾನೆ.
ಹುಡುಗಿಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.