ನವದೆಹಲಿ: ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರಿಯಕರ ಪ್ರೇಯಸಿಯ ಪ್ರಾಣ ತೆಗೆದ ಘಟನೆ ದೆಹಲಿಯಲ್ಲಿ ನಡೆದಿದೆ.
ಈ ಸಂಬಂಧ 38 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಈತ ಮಹಿಳೆ ಜೊತೆ ಕೆಲವು ಸಮಯದಿಂದ ಪ್ರೇಮ ಸಂಬಂಧ ಹೊಂದಿದ್ದ. ಆದರೆ ಇತ್ತೀಚೆಗೆ ಆಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು.
ಈ ಕಾರಣಕ್ಕೆ ಆಕೆಯ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಮಹಿಳೆ ನಾಪತ್ತೆಯಾದ ಬಗ್ಗೆ ಮನೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ.