ಪ್ರಧಾನಿ ಮೋದಿ ಅವರ ವಿರುದ್ಧ ವ್ಯಂಗ್ಯವಾಗಿ ಟ್ವೀಟ್ ಮಾಡಿ ಸುದ್ದಿಯಲ್ಲಿರುವ ಬೆನ್ನಲ್ಲೇ ಕಾಮಿಡಿಯನ್ ಕಪಿಲ್ ಶರ್ಮಾ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಉತ್ತರ ಮುಂಬೈನ ಸಬ್ ಅರ್ಬನ್ ಗೋರೆಗಾಂವ್‌ನಲ್ಲಿ ಶರ್ಮಾ ಅನಧಿಕೃತ ಕಟ್ಟಡವನ್ನು ಹೊಂದಿದ್ದಾರೆ ಎಂದು ದೂರು ದಾಖಲಾಗಿದೆ. ಹೀಗಾಗಿ ಮುಂಬೈ ಪೊಲೀಸರು ಸದ್ಯದಲ್ಲಿಯೇ ಶರ್ಮಾರನ್ನು ಕರೆದು ವಿಚಾರಣೆಗೊಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಟ್ಟು 6 ಪ್ರಕರಣಗಳು ದಾಖಲಾಗಿದ್ದು, ನಾವು ಡಾಕ್ಯುಮೆಂಟ್‌ನ್ನು ಸಿದ್ಧಪಡಿಸುತ್ತಿದ್ದೇವೆ. ಪಂಚನಾಮೆ ಮಾಡಿದ ಬಳಿಕ ಒಂದು ಅಥವಾ ಎರಡು ದಿನಗಳಲ್ಲಿ ಶರ್ಮಾ ಅವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಮೊದಲು ನೋಟಿಸ್ ಕಳುಹಿಸಿ ಬಳಿಕ ಅವರನ್ನು ವಿಚಾರಣೆಗೆ ಕರೆಯಲಾಗುವುದು. ಅವರನ್ನು ನೇರವಾಗಿ ಬಂಧಿಸುವ ಹಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ