Select Your Language

Notifications

webdunia
webdunia
webdunia
webdunia

ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ ನಡೆಸಿದ ಬಾವ

ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ ನಡೆಸಿದ ಬಾವ
ಮಧ‍್ಯಪ್ರದೇಶ , ಬುಧವಾರ, 13 ಜುಲೈ 2022 (09:10 IST)
ಮಧ‍್ಯಪ್ರದೇಶ: ಅಪ್ರಾಪ್ತ ವಯಸ್ಸಿನ ನಾದಿನಿ ಮೇಲೆ ಅತ್ಯಾಚಾರ ನಡೆಸಿದ ಬಾವ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದಾನೆ. ಮಧ‍್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ ಹೊಟ್ಟೆನೋವೆಂದು ಹೇಳಿದಾಗ ಪೋಷಕರು ವೈದ್ಯರ ಬಳಿ ಕರೆದೊಯ್ದಿದ್ದರು. ಈ ವೇಳೆ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಮೂರು ತಿಂಗಳ ಹಿಂದೆ ಮನೆಗೆ ಬಂದಿದ್ದ ಬಾವ ತನ್ನ ಮೇಲೆ ಅತ್ಯಾಚಾರ ನಡೆಸಿದ್ದನ್ನು ಹೇಳಿಕೊಂಡಿದ್ದಾಳೆ. ಯಾರಿಗಾದರೂ ಹೇಳಿದರೆ ತನ್ನ ಬಗ್ಗೆ ತಪ್ಪು ತಿಳಿದಾರೆಂದು ಬಾಲಕಿ ಯಾರಿಗೂ ಹೇಳಿರಲಿಲ್ಲ. ಈಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 541 ಪಿಯು ಕಾಲೇಜುಗಳಲ್ಲಿ ಈ ವರ್ಷ ಶೂನ್ಯ ದಾಖಲಾತಿ