ನವದೆಹಲಿ: ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಕೆಲ ಹೊತ್ತು ಮಾತುಕತೆ ನಡೆಸಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಅವರು ಹೂಗುಚ್ಚ ನೀಡಿ ದೀಪಾವಳಿ ಶುಭಾಶಯ ಕೋರಿದರು.
ಈ ಕುರಿತು ಯಡಿಯೂರಪ್ಪ ಅವರು ಎಕ್ಸ್ ಖಾತೆಯಲ್ಲಿ ಮೋದಿ ಜತೆಗಿನ ಫೋಟೋ ಹಂಚಿಕೊಂಡು ಪ್ರಧಾನಿಯನ್ನು ಭೇಟಿಯಾಗಿ ಮುಂಬರುವ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಇನ್ನೂ ಬಿಎಸ್‌ವೈ ಅವರು ಇದಕ್ಕೂ ಮುನ್ನಾ ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ನಡೆದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಂಡರು.