Select Your Language

Notifications

webdunia
webdunia
webdunia
Sunday, 13 April 2025
webdunia

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್ : ಜೊಲ್ಲೆ

ಬೆಂಗಳೂರು , ಮಂಗಳವಾರ, 1 ಫೆಬ್ರವರಿ 2022 (15:27 IST)
ಬೆಂಗಳೂರು : ಇಂದು ಕೇಂದ್ರ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಮ್ಮ ದೇಶದ ಆರ್ಥಿಕತೆಗೆ ಬೂಸ್ಟರ್ ಡೋಸ್ ಆಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸಂತೋಷ ವ್ಯಕ್ತಪಡಿಸಿದರು.

ಬಜೆಟ್ ನಲ್ಲಿ, ಹೆದ್ದಾರಿ ಜಾಲವನ್ನ 25 ಸಾವಿರ ಕಿಲೋಮೀಟರ್ಗಳಷ್ಟು ವಿಸ್ತರಿಸುವುದು. ದೇಶದ 5 ನದಿಗಳನ್ನು ಜೋಡಿಸುವ ವಿಸ್ತ್ರುತ ಯೋಜನೆಯನ್ನು ಅಂತಿಮಗೊಳಿಸಿರುವುದು. ನೈಸರ್ಗಿಕ ಕೃಷಿಗೆ ಒತ್ತು ನೀಡುವಂತಹ ಮಹತ್ವದ ಅಂಶಗಳನ್ನು ಆಯವ್ಯಯದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು.

ಹಾಗೆಯೇ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ತರಗತಿಗೊಂದು ಟಿವಿ ಚಾನೆಲ್ ಪ್ರಸ್ತಾವನೆ, ಪ್ರಾದೇಶಿಕ ಭಾಷೆಗಳೂ ಸೇರಿ 200 ಹೊಸ ಚಾನಲ್ ಆರಂಭಕ್ಕೆ ಪ್ರಸ್ತಾಪ, ಶಿಕ್ಷಕರುಗಳಿಗೆ ಡಿಜಿಟಲ್ ಟೂಲ್ಸ್ಗಳ ನೀಡುವಿಕೆ ಹೀಗೆ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೂ ಒತ್ತು ನೀಡಲಾಗಿದೆ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕ ಬಜೆಟ್ ಪ್ರಭಾವಶಾಲಿಯಾಗಿದೆ: ಮಹಿಂದ್ರಾ