ಸೂರತ್: ನಗರದಲ್ಲಿನ ಆರು ಅಂತಸ್ತಿನ ಕಟ್ಟಡ ಕುಸಿದ ಪ್ರಕರಣದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ. ಏಳು ಮೃತ ದೇಹಗಳನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸೂರತ್ ಉಪ ಪೊಲೀಸ್ ಆಯುಕ್ತ (ವಲಯ 6) ರಾಜೇಶ್ ಪರ್ಮಾರ್ ಹೇಳಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ರಾತ್ರಿಯಿಡೀ ಮುಂದುವರಿದಿರುವ ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವಾರು ಜವಳಿ ಕಾರ್ಮಿಕರು ಮತ್ತು ಅವರ ಕುಟುಂಬಗಳು ತಂಗಿದ್ದ ಸಚಿನ್‌ನಲ್ಲಿ ನೆಲ ಮತ್ತು ಐದು ಅಂತಸ್ತಿನ ಶಿಥಿಲಗೊಂಡ ಕಟ್ಟಡವು ಶನಿವಾರ ಮಧ್ಯಾಹ್ನ ಕುಸಿದಿದೆ.
ಪಲಿಗಾಂನ ಡಿ ಎನ್ ನಗರ ಸೊಸೈಟಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಿಸಲ್ಪಟ್ಟ ಮಹಿಳೆ ಕಾಶಿಶ್ ಶರ್ಮಾ (23) ಅವರನ್ನು ಹೊಸ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<>