Publish Date: Thu, 22 Dec 2022 (08:35 IST)
Updated Date: Thu, 22 Dec 2022 (10:11 IST)
ರಿಯಾದ್ : ಮುಸ್ಲಿಂ ಮಹಿಳೆಯರು ಧರಿಸುವ ಧಾರ್ಮಿಕ ಉಡುಗೆ ಬುರ್ಖಾವನ್ನು (ಅಬಯಾ) ಸೌದಿ ಅರೇಬಿಯಾದ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ.
ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ ಹಾಗೂ ತರಬೇತಿ ವ್ಯವಸ್ಥೆಗೆ ಮಾನ್ಯತೆ ನೀಡುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬುರ್ಖಾ ಧರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಘೋಷಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಧರಿಸಬೇಕು. ಎಲ್ಲಾ ಉಡುಪುಗಳೂ ಸಾರ್ವಜನಿಕ ಸಭ್ಯತೆಯ ನಿಯಮಗಳಿಗೆ ಬದ್ಧವಾಗಿರಬೇಕು ಎಂದು ಇಟಿಇಸಿ ಹೇಳಿದೆ. ಆದರೆ ಇಲ್ಲಿ ಹಿಜಬ್ ಬಗ್ಗೆ ಯಾವುದೇ ಪ್ರಸ್ತಾಪ ಮಾಡದೇ ಕೇವಲ ಅಬಯಾವನ್ನು ಮಾತ್ರವೇ ನಿಷೇಧಿಸಲಾಗಿದೆ.