ಅಲಕಾನಂದ ನದಿಗೆ ಉರುಳಿದ ಬಸ್: ತೀರ್ಥಯಾತ್ರೆಗೆ ಹೋದವರು ನೀರಿನಲ್ಲಿ ಕೊಚ್ಚಿ ಹೋದರು

Krishnaveni K
ಗುರುವಾರ, 26 ಜೂನ್ 2025 (11:49 IST)
Photo Credit: X
ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಬಳಿ 18 ಜನರನ್ನು ಹೊತ್ತಿದ್ದ ಬಸ್ ಒಂದು ಅಲಕಾನಂದ ನದಿಗೆ ಬಿದ್ದು 10 ಮಂದಿ ನಾಪತ್ತೆಯಾಗಿದ್ದಾರೆ. ಈ ಪೈಕಿ ಇಬ್ಬರು ಸಾವನ್ನಪ್ಪಿರುವುದು ಕನ್ ಫರ್ಮ್ ಆಗಿದೆ.

ತೀರ್ಥಯಾತ್ರೆಗೆಂದು ಹೋದವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವುದು ಖಚಿತವಾಗಿದ್ದು 10 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಳೆಯಿಂದಾಗಿ ನದಿಯಲ್ಲಿ ನೀರಿನ ಅಬ್ಬರವೂ ಜೋರಾಗಿಯೇ ಇದೆ. ಈ ಹಿನ್ನಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ನದಿಯಲ್ಲಿ ನೀರು ತುಂಬಿರುವುದರಿಂದ ಮತ್ತು ಕಡಿದಾದ ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗುತ್ತಿದೆ. ಪರಿಹಾರ ಕಾರ್ಯದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ತೊಡಗಿಸಿಕೊಂಡಿದ್ದು ನಾಪತ್ತೆಯಾದವರ ಪತ್ತೆಗೆ ಹರಸಾಹಸಪಡುತ್ತಿದ್ದಾರೆ. ಎಲ್ಲರೂ ತೀರ್ಥಯಾತ್ರೆಗೆಂದು ಹೊರಟವರು ಎನ್ನಲಾಗಿದೆ. ಮೃತರ ಬಗ್ಗೆ ಹೆಚ್ಚಿನ ವರದಿಗಳು ಇನ್ನಷ್ಟೇ ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments