Webdunia - Bharat's app for daily news and videos

Install App

ಇಂಡಿಯಾ ಒಕ್ಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಯಾರು ಅಂತಾನೇ ಗೊತ್ತಿಲ್ಲ: ಬಿವೈ ವಿಜಯೇಂದ್ರ ವ್ಯಂಗ್ಯ

Krishnaveni K
ಶನಿವಾರ, 6 ಏಪ್ರಿಲ್ 2024 (09:49 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ವಿರುದ್ಧ ಹೋರಾಡಲು ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಒಕ್ಕೂಟದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.

‘ಬಿಜೆಪಿಗೆ ನರೇಂದ್ರ ಮೋದಿಯವರು ಪ್ರಧಾನಿ ಅಭ್ಯರ್ಥಿ. ಆದರೆ ಇಂಡಿಯಾ ಒಕ್ಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಯಾರು ಎಂಬುದೇ ನಮ್ಮ ಪ್ರಶ್ನೆ. ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನವನ್ನೂ ಗೆಲ್ಲಲ್ಲ’ ಎಂದು ಬಿವೈ ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.

ಈ ಮೊದಲು ಕಾಂಗ್ರೆಸ್ ಪ್ರಣಾಳಿಕೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಯಾರು ಎಂದು ಲೋಕಸಭೆ ಚುನಾವಣೆ ಗೆಲುವಿನ ಬಳಿಕ ಎಲ್ಲರೂ ಒಟ್ಟಾಗಿ ತೀರ್ಮಾನಿಸಿ ಘೋಷಣೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ, ಈ ಮೊದಲು ವಾಜಪೇಯಿ ಸರ್ಕಾರವಿದ್ದಾಗ ಭಾರತ ಹೊಳೆಯುತ್ತಿದೆ ಎಂದು ಬಿಜೆಪಿ ಬೆಂಬಲಿತ ಮಾಧ್ಯಮಗಳು ಪ್ರಚಾರ ಮಾಡಿದ್ದವು. ಕೊನೆಗೆ ಆ ಘೋಷಣೆ ಏನಾಯ್ತು? ಯಾರು ಗೆದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ರಾಹುಲ್ ವ್ಯಂಗ್ಯ ಮಾಡಿದ್ದರು.

ಈಗ ರಾಹುಲ್ ಹೇಳಿಕೆಗೆ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.  ಪ್ರಧಾನಿ ಅಭ್ಯರ್ಥಿ ಯಾರು ಎಂದು ಮೊದಲೇ ಘೋಷಿಸುವ ಧೈರ್ಯವೂ ಇಂಡಿಯಾ ಒಕ್ಕೂಟಕ್ಕಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments