Webdunia - Bharat's app for daily news and videos

Install App

ರಾಜ್ಯಾಧ್ಯಕ್ಷ ಸ್ಥಾನಕ್ಕೆ ವರ್ಷ ತುಂಬಿದ ನೆಪದಲ್ಲಿ ಮೋದಿ ಭೇಟಿಯಾಗ ಬಿವೈ ವಿಜಯೇಂದ್ರ

Krishnaveni K
ಬುಧವಾರ, 18 ಡಿಸೆಂಬರ್ 2024 (13:39 IST)
ನವದೆಹಲಿ: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
 
ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಿ  ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ ಎಂದು ವಿವರಿಸಿದ್ದಾರೆ.
 
ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದಿದ್ದಾರೆ.
 
ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು ಎಂದು ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments