Select Your Language

Notifications

webdunia
webdunia
webdunia
webdunia

ಎಕ್ಸಿಟ್ ಪೋಲ್ ಫಲಿತಾಂಶ ಕಾಂಗ್ರೆಸ್ಸಿಗರ ಎದೆಬಡಿತ ಹೆಚ್ಚಿಸಿದೆ: ಬಿವೈ ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಸೋಮವಾರ, 3 ಜೂನ್ 2024 (15:37 IST)
3-6-2024
 
ಗೆ, 
ಬೆಂಗಳೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮಾನ್ಯ ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಣ್ಣದಲ್ಲ; ಇದರ ಆಳ ಮತ್ತು ಅಗಲ ಇನ್ನೂ ಹೆಚ್ಚಾಗಿದೆ. ಕೂಡಲೇ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಲು ನಾವು ಆಗ್ರಹಿಸಿದ್ದರೂ ಮುಖ್ಯಮಂತ್ರಿಗಳು ಇನ್ನೂ ಮನಸ್ಸು ಮಾಡಿಲ್ಲ ಎಂದು ಆಕ್ಷೇಪಿಸಿದರು.

ತೆಲಂಗಾಣಕ್ಕೆ ಹಣ ವರ್ಗಾವಣೆ, ನಕಲಿ ಕಂಪನಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾಯಿಸಿದ್ದು ಬಯಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೋಸ್ಕರ ಈ ಎಸ್‍ಟಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಿದ್ದಾರೆ. ಬೇರೆ ಬೇರೆ ಖಾತೆಗಳಿಂದ ಈ ಹಣ ಚುನಾವಣೆಗೆ ದುರುಪಯೋಗ ಆಗಿದೆ ಎಂದು ಆರೋಪಿಸಿದರು.

ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಕೂಡ ಪತ್ರ ಬರೆದಿದೆ. ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ತಮ್ಮ ಕೊಳಕನ್ನು ಮುಚ್ಚಿ ಹಾಕಲು ಆತುರಾತುರವಾಗಿ ಎಸ್‍ಐಟಿ ರಚಿಸಿದ್ದಾರೆ ಎಂದು ಅವರು ಟೀಕಿಸಿದರು. ಬಿಜೆಪಿ ಈ ವಿಚಾರದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
 
ಹಗರಣದ ಹಿಂದೆ ದೊಡ್ಡ ಹೆಸರು..
ವಾಲ್ಮೀಕಿ ನಿಗಮದ ಹಗರಣವು ಕೇವಲ ಸಚಿವರಿಗೆ ಸೀಮಿತವಾಗಿಲ್ಲ. ಬಹಳ ದೊಡ್ಡ ದೊಡ್ಡ ಹೆಸರುಗಳು ಕೇಳಿಬರುತ್ತಿವೆ. ಮುಂದಿನ ದಿನಗಳಲ್ಲಿ ಸತ್ಯಾಂಶ ಹೊರಬರಲಿದೆ ಎಂದ ವಿಜಯೇಂದ್ರ ಅವರು, ಎಸ್‍ಐಟಿಯಿಂದ ನ್ಯಾಯಯುತ ತನಿಖೆ ಅಸಾಧ್ಯ; ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದರು. ಸದ್ಯವೇ ರಾಜ್ಯಪಾಲರನ್ನು ಭೇಟಿ ಮಾಡಿ ಈ ವಿಚಾರದಲ್ಲಿ ಒತ್ತಾಯ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
 
ಕೇಂದ್ರದ ವರಿಷ್ಠರು, ಹಿರಿಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ಮರಾಠ ಸಮಾಜದ ಮುಖಂಡ, ಬಿಜೆಪಿ ಹಿರಿಯರಾದ ಎಂ.ಜಿ.ಮುಳೆ ಅವರನ್ನು ವಿಧಾನಪರಿಷತ್ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದ ಕುರಿತು ಸಂತಸ ಸೂಚಿಸಿದರು. ಇದರಿಂದ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ಧ್ವನಿ ಎತ್ತಿ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಬಂಧನದ ಭೀತಿಯಲ್ಲಿರುವ ಭವಾನಿ ರೇವಣ್ಣ ಪ್ರಕರಣದಲ್ಲಿ ನಮ್ಮ ಹಸ್ತಕ್ಷೇಪವಿಲ್ಲ: ಎಚ್‌ ಡಿ ಕುಮಾರಸ್ವಾಮಿ