ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವ ಆಲೋಚನೆಗೆ ಕೇಂದ್ರ ಚುನಾವಣೆ ಆಯೋಗ ಬೆಂಬಲ ಸೂಚಿಸಿ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಚುನಾವಣೆ ಆಯೋಗ ಮೊದಲ ಬಾರಿಗೆ ಲೋಕಸಭೆ ಮತ್ತು ವಿಧಾನಸಬೆ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸಲು ಸಮ್ಮತಿ ಸೂಚಿಸಿದೆ ಎನ್ನಲಾಗಿದೆ.
ಒಂದು ವೇಳೆ, ಎಲ್ಲಾ ರಾಜಕೀಯ ಪಕ್ಷಗಳು ಸರ್ವಸಮ್ಮತಿಯಿಂದ ಒಪ್ಪಿದಲ್ಲಿ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವಲ್ಲಿ ಯಾವುದೇ ಹೊಣೆಯಾಗುವುದಿಲ್ಲ ಎಂದು ಕೇಂದ್ರ ಕಾನೂನು ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.
ಸಂಸದೀಯ ವ್ಯವಹಾರಗಳ ಸಮಿತಿ,ಒಂದೇ ಬಾರಿಗೆ ಲೋಕಸಭೆ ವಿಧಾನಸಭೆ ಚುನಾವಣೆಗಳನ್ನು ನಡೆಸಲು ಸಾಧ್ಯವೇ ಎಂದು ಕೇಳಿದ್ದ ವರದಿಗೆ ಉತ್ತರ ನೀಡಲಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಒಂದೇ ಬಾರಿಗೆ ಸ್ಥಳೀಯ, ಪಂಚಾಯಿತಿ, ನಗರಸಭೆ ಮತ್ತು ವಿಧಾನಸಭೆ ಹಾಗೂ ಲೋಕಸಭೆಗೆ ಚುನಾವಣೆ ನಡೆಸುವ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.