Select Your Language

Notifications

webdunia
webdunia
webdunia
webdunia

ಬಹುಮತದ ಆಧಾರದ ಮೇಲೆ ಮುಂದಿನ ಸಿಎಂ: ಅಖಿಲೇಶ್‌ಗೆ ಶಿವಪಾಲ್ ಯಾದವ್ ಟಾಂಗ್

ಬಹುಮತದ ಆಧಾರದ ಮೇಲೆ ಮುಂದಿನ ಸಿಎಂ: ಅಖಿಲೇಶ್‌ಗೆ ಶಿವಪಾಲ್ ಯಾದವ್ ಟಾಂಗ್
ಲಕ್ನೋ: , ಗುರುವಾರ, 15 ಸೆಪ್ಟಂಬರ್ 2016 (16:44 IST)
ಪಕ್ಷದ ಹಿರಿಯ ನಾಯಕರೊಂದಿಗೆ ವೈಮನಸ್ಸಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್, ಮುಂಬರುವ 2017ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಿ ಮತ್ತೊಮ್ಮೆ ರಾಜ್ಯದಲ್ಲಿ ಸಮಾಜವಾದಿ ಪಕ್ಷದ ಸರಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ತಿಳಿಸಿದ್ದಾರೆ.
 
ಪಕ್ಷದಲ್ಲಿ ಯಾವುದೇ ರೀತಿಯ ಸಂವಹನದ ಕೊರತೆ ಎದುರಾಗಿಲ್ಲ. ನೇತಾಜಿ ಮುಲಾಯಂ ಸಿಂಗ್ ಯಾದವ್ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ನನ್ನ ಕರ್ತವ್ಯವನ್ನು ನಾನು ಮಾಡುತ್ತೇನೆ. ನೇತಾಜಿ ನಿರ್ಧಾರವನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಅಖಿಲೇಶ್ ಯಾದವ್ ಸಿಎಂ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನೇತಾಜಿ ನಿರ್ಧಾರವನ್ನು ಸ್ವೀಕರಿಸುತ್ತೇವೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಅಖಿಲೇಶ್ ಯಾದವ್ ಯಾಕೆ ನಿಮ್ಮ ಖಾತೆಗಳನ್ನು ಕಿತ್ತುಕೊಂಡಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಖಾತೆಗಳನ್ನು ಯಾಕೆ ಕಿತ್ತುಕೊಂಡಿದ್ದಾರೆ ಎನ್ನುವ ಬಗ್ಗೆ ಗೊತ್ತಿಲ್ಲ. ಸಿಎಂ ಮತ್ತು ನೇತಾಜಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾಗೆ ಕಂಟಕದ ನಂತ್ರ ಸಿಎಂ ಸಿದ್ದರಾಮಯ್ಯಗೆ ಇದೀಗ ಸರ್ಪ ಕಂಟಕ