Select Your Language

Notifications

webdunia
webdunia
webdunia
webdunia

ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ರದ್ದುಗೊಳಿಸಿ!

ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ರದ್ದುಗೊಳಿಸಿ!
ನವದೆಹಲಿ , ಮಂಗಳವಾರ, 30 ನವೆಂಬರ್ 2021 (12:50 IST)
ನವದೆಹಲಿ : ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಹರಡುವ ಭೀತಿ
ಇರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ನಿರ್ಬಂಧ ವಿಧಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಓಮಿಕ್ರಾನ್ ಪೀಡಿತ ದೇಶಗಳಿಂದ ಆಗಮಿಸುವ ವಿಮಾನಗಳಿಗೆ ಹಲವು ದೇಶಗಳು ನಿರ್ಬಂಧ ವಿಧಿಸಿವೆ. ಆದರೆ ನಮ್ಮಲ್ಲಿ ಏಕೆ ವಿಳಂಬವಾಗುತ್ತಿದೆ. ಹೊಸ ತಳಿ ಹರಡುವಿಕೆ ನಿಯಂತ್ರಣಕ್ಕಾಗಿ ಇಸ್ರೇಲ್, ಜಪಾನ್ ದೇಶಗಳು ಸಹ ಪ್ರಯಾಣ ನಿರ್ಬಂಧಗಳನ್ನು ಘೋಷಿಸಿವೆ ಎಂದು ತಿಳಿಸಿದ್ದಾರೆ. 
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಎಎನ್ಐ ಸುದ್ದಿ ಸಂಸ್ಥೆಯ ವರದಿಯೊಂದನ್ನು (ದಕ್ಷಿಣ ಆಫ್ರಿಕಾದಿಂದ ಮರಳಿದ 39 ವಯಸ್ಸಿನ ಚತ್ತೀಸಗಢ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ) ಹಂಚಿಕೊಂಡಿದ್ದಾರೆ. 
ಓಮಿಕ್ರಾನ್ ಪೀಡಿತ 12 ದೇಶಗಳಿಂದ ವಿಮಾನಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಮಹಾರಾಷ್ಟ್ರ ಸರ್ಕಾರ ಕೂಡ ನಿರ್ಧರಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ!