Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ
ಮುಂಬೈ , ಸೋಮವಾರ, 3 ಆಗಸ್ಟ್ 2015 (15:17 IST)
ಕಾರು ತಯಾರಿಕೆ ಸಂಸ್ಥೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 86 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಏಷ್ಯಾ ಮಾರುಕಟ್ಟೆಗಳ ಆರಂಭಿಕ ಕುಸಿತ ಕಂಡಿದ್ದರೂ ಹೂಡಿಕೆದಾರರು ವಾಹನೋದ್ಯಮ ಕ್ಷೇತ್ರಗಳ ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ವಾಹನೋದ್ಯಮ, ಗೃಹೋಪಕರಣ ವಸ್ತುಗಳು, ಬ್ಯಾಂಕಿಂಗ್ ಮತ್ತು ವಿದ್ಯುತ್ ಕ್ಷೇತ್ರದ ಶೇರುಗಳ ವಹಿವಾಟು ಚೇತರಿಕೆಯಿಂದಾಗಿ 86.92 ಪಾಯಿಂಟ್‌ಗಳ ಏರಿಕೆ ಕಂಡು 28,201.48 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 17.95 ಪಾಯಿಂಟ್‌ಗಳ ಏರಿಕೆ ಕಂಡು 8,550.80 ಅಂಕಗಳಿಗೆ ತಲುಪಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.57 ರಷ್ಟು ಕುಸಿತ ಕಂಡಿದ್ದು, ಜಪಾನ್‌‍ನ ನಿಕೈ ಸೂಚ್ಯಂಕ ಕೂಡಾ ಶೇ0.22 ರಷ್ಟು ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

Share this Story:

Follow Webdunia kannada