Select Your Language

Notifications

webdunia
webdunia
webdunia
webdunia

ತಿರುಪತಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ

Tirupati Tirumala Constituency

Sampriya

ಹೈದರಾಬಾದ್ , ಸೋಮವಾರ, 10 ಫೆಬ್ರವರಿ 2025 (15:16 IST)
Photo Courtesy X
ಹೈದರಾಬಾದ್: ತಿರುಪತಿ ಕ್ಷೇತ್ರದಲ್ಲಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಿದ ಪ್ರಕರಣ ಸಂಬಂಧ ನಾಲ್ವರನ್ನು  ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ (ರೂರ್ಕಿ, ಉತ್ತರಾಖಂಡ), ಬಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿಯ (ದುಂಡಿಗಲ್) ವ್ಯವಸ್ಥಾಪಕ ನಿರ್ದೇಶಕ ರಾಜು ರಾಜಶೇಖರನ್ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳನ್ನು ತಿರುಪತಿ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ತುಪ್ಪ ಪೂರೈಕೆಯ ಸಂದರ್ಭದಲ್ಲಿ ಗಂಭೀರ ಉಲ್ಲಂಘನೆಗಳು ಕಂಡುಬಂದಿದ್ದು, ಪ್ರತಿ ಹಂತದಲ್ಲೂ ಅಕ್ರಮ ನಡೆದಿರುವುದು ಸಿಬಿಐ ತನಿಖೆ ವೇಳೆ ದೃಢಪಟ್ಟಿದೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ.

ತುಪ್ಪ ಪೂರೈಕೆಗೆ ವೈಷ್ಣವಿ ಡೈರಿಯ ಪ್ರತಿನಿಧಿಗಳು ಎಆರ್ ಡೈರಿ ಹೆಸರಿನಲ್ಲಿ ಟೆಂಡರ್ ಪಡೆದಿದ್ದಾರೆ. ವೈಷ್ಣವಿ ಡೈರಿಯು ಎಆರ್ ಡೈರಿ ಹೆಸರನ್ನು ಬಳಸಿಕೊಂಡು ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು ಮತ್ತು ಸೀಲುಗಳನ್ನು ಬಳಸಿದೆ. ಜತೆಗೆ, ಉತ್ತರಾಖಂಡ ರೂರ್ಕಿಯ ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಪಡೆಯುವುದಾಗಿ ವೈಷ್ಣವಿ ಡೈರಿ ನಕಲಿ ದಾಖಲೆಗಳನ್ನು ಸೃಷ್ಟಿಸಿದೆ ಎಂದು ಸಿಬಿಐ ತಿಳಿಸಿದೆ.

ಭೋಲೆ ಬಾಬಾ ಡೈರಿಗೆ ಇಷ್ಟೊಂದು ಪ್ರಮಾಣದ ತುಪ್ಪವನ್ನು ಪೂರೈಸುವ ಸಾಮರ್ಥ್ಯ ಇಲ್ಲ. ಹಾಗಾಗಿ ತುಪ್ಪ ಪೂರೈಕೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವುದರಿಂದ ಮೂರು ಡೈರಿಗಳ ನಾಲ್ವರನ್ನು ಬಂಧಿಸಲಾಗಿದೆ ಎಂದು ಸಿಬಿಐ ತಂಡ ಮಾಹಿತಿ ನೀಡಿದೆ.

ಆಂಧ್ರಪ್ರದೇಶದಲ್ಲಿ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿಯಲ್ಲಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಗರಣ ಬೆಳಕಿಗೆ ಬಂದಾಗ ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ ಬಾಸ್ ಖರ್ಗೆ ಕುಂಭಮೇಳಕ್ಕೆ ಬೈದ್ರು ನೀವು ನೋಡಿದ್ರೆ ಸ್ನಾನ ಮಾಡಿದ್ರಿ: ಡಿಕೆ ಶಿವಕುಮಾರ್ ಟ್ರೋಲ್