Publish Date: Sat, 09 Sep 2017 (17:54 IST)
Updated Date: Sat, 09 Sep 2017 (17:57 IST)
ಹಿರಿಯ ಕಾಂಗ್ರೆಸ್ ನಾಯಕಿ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಕೇಂದ್ರದ ಪರಿಸರ ಖಾತೆ ಸಚಿವೆಯಾಗಿದ್ದಾಗ ಯೋಜನೆಗಳಿಗೆ ಕಾನೂನುಬಾಹಿರವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಂದು ಚೆನ್ನೈನಲ್ಲಿರುವ ಜಯಂತಿ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕರ ನಿವಾಸಗಳ ಸರಣಿ ದಾಳಿ ನಡೆಸುತ್ತಿರುವ ಸಿಬಿಐ ಪ್ರಧಾನಿ ಮೋದಿ ಸರಕಾರದ ಆದೇಶದಂತೆ ದಾಳಿ ನಡೆಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.