ನವದೆಹಲಿ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲೆಗಳ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧರಿಸಿದೆ.
ಇಷ್ಟು ದಿನ ಸರ್ಕಾರಿ ಶಾಲಾ ಶಿಕ್ಷಕರಿಗಷ್ಟೇ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಈ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತ್ಯತ್ತಮ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ತೀರ್ಮಾನಿಸಿದೆ.
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023ಕ್ಕೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನ ಮಾಡಿದೆ. ಜುಲೈ 15 ರವರೆಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಅತ್ಯುತ್ತಮ ಶಿಕ್ಷಕರಿಗೆ ಹಾಗೂ 10 ವರ್ಷ ಸತತವಾಗಿ ಸೇವೆ ಸಲ್ಲಿಸಿರುವ ಖಾಸಗಿ ಶಿಕ್ಷಕರಿಗೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.