Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ- ಸಿದ್ದರಾಮಯ್ಯ ಕಿಡಿ

ಕೇಂದ್ರ ಸರ್ಕಾರ ರೈತ  ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ- ಸಿದ್ದರಾಮಯ್ಯ ಕಿಡಿ
ಬೆಂಗಳೂರು , ಮಂಗಳವಾರ, 8 ಡಿಸೆಂಬರ್ 2020 (12:21 IST)
ಬೆಂಗಳೂರು : ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತ ವಿರೋಧಿ ನೀತಿ , ರೈತ  ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಬೇಡಿಕೆಯನ್ನು ಈಡೇರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ಅಂಬಾನಿ, ಅದಾನಿಯಂತಹ ಕಾರ್ಪೋರೇಟ್ ಬಾಡಿಗಳ ಕೈಗೊಂಬೆಯಾಗಿದೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ರೈತ ವಿರೋಧಿ ಕಾಯ್ದೆಗಳನ್ನು ರೈತ ಸಮುದಾಯ ವಿರೋಧಿಸ್ತಿದೆ ಎಂದು ಹೇಳಿದ್ದಾರೆ.

ಹಾಗೇ ಬದಲಾವಣೆ ತರಲು ಸಾಮಾಜಿಕ ಒಳಿತಿಗಾಗಿ ಕಾನೂನು ರಚನೆ. ಆದ್ರೆ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರ ನಾಶಪಡಿಸಲು ಹೊರಟಿದೆ. ರೈತರ ವಿರುದ್ಧವಾಗಿ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ರೈತರ ವಿರೋಧವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ವಿಪಕ್ಷಗಳ ದನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಕೃಷಿ ತಿದ್ದಪಡಿಯನ್ನು ಹಲವು ಪಕ್ಷಗಳು ವಿರೋಧಿಸಿವೆ. ಕಾಂಗ್ರೆಸ್ ಪಕ್ಷ ರೈತರ ಹೋರಾಟವನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ರೈತರನ್ನು ತಪ್ಪು ದಾರಿಗೆಳೆಯುತ್ತಿದೆ ಎಂದ ಕೇಂದ್ರ ಸಚಿವ