Select Your Language

Notifications

webdunia
webdunia
webdunia
webdunia

ದುರುದ್ದೇಶದಿಂದಲೇ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆ ಅಕ್ಕಿ ನೀಡುತ್ತಿಲ್ಲ: ಖಂಡ್ರೆ ವಾಗ್ದಾಳಿ

ದುರುದ್ದೇಶದಿಂದಲೇ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆ ಅಕ್ಕಿ ನೀಡುತ್ತಿಲ್ಲ: ಖಂಡ್ರೆ ವಾಗ್ದಾಳಿ
ನವದೆಹಲಿ , ಬುಧವಾರ, 21 ಜೂನ್ 2023 (06:52 IST)
ನವದೆಹಲಿ: ಭಾರತದ ಆಹಾರ ನಿಗಮದ ಉಗ್ರಾಣಗಳಲ್ಲಿ ಸಾಕಷ್ಟು ಪ್ರಮಾಣ ಅಕ್ಕಿಯ ದಾಸ್ತಾನು ಇದೆ. ಯಥಿನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುವ ಕೇಂದ್ರ ಸರ್ಕಾರ ಬಡವರಿಗೆ ತಿನ್ನಲು ನೀಡಲು ನಿರಾಕರಿಸುತ್ತಿದೆ.

ಅನ್ನಭಾಗ್ಯ ಯೋಜನೆ ತಡೆಯಲು ದುರದ್ದೇಶಪೂರ್ವಕವಾಗಿಯೇ ಅಕ್ಕಿಯನ್ನು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.

 
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದ ಮಹತ್ವಾಕಾಂಕ್ಷಿ ಯೋಜನೆ ತಡೆಯಲು ಕೇಂದ್ರ ಸರ್ಕಾರದಿಂದ ಪ್ರಯತ್ನ ನಡೆಯುತ್ತಿದೆ. ಕೇಂದ್ರ ಏನೇ ಪ್ರಯತ್ನ ಮಾಡಿದರೂ ಆದರೆ ನಾವು ಯೋಜನೆ ಜಾರಿ ಮಾಡುತ್ತೇವೆ. ಬೇರೆ ರಾಜ್ಯಗಳಿಂದ ಅಕ್ಕಿ ತಂದು ಜನರಿಗೆ ನೀಡುತ್ತೇವೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ನರೇಂದ್ರ ಮೋದಿ