Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಕೇಂದ್ರ ಸರ್ಕಾರದ ಮಹಿಳಾ ನೌಕರರಿಗೆ 90 ದಿನ ರಜೆ

ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಕೇಂದ್ರ ಸರ್ಕಾರದ ಮಹಿಳಾ ನೌಕರರಿಗೆ 90 ದಿನ ರಜೆ
ನವದೆಹಲಿ , ಮಂಗಳವಾರ, 21 ಮಾರ್ಚ್ 2017 (07:46 IST)
ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿ ಕೇಸ್ ದಾಖಲಿಸುವ ಕೇಂದ್ರ ಸರ್ಕಾರದ ಮಹಿಳಾ ನೌಕರರಿಗೆ ವಿಚಾರಣೆ ಸೇರಿದಂತೆ ಕಾನೂನು ಪ್ರಕ್ರಿಯೆಗಳಿಗೆ 90 ದಿನಗಳ ಪೇಯ್ಡ್ ರಜೆ ಸಿಗಲಿದೆ. ಕೆಲಸದ ಸ್ಥಳದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕಾಯ್ದೆಯಡಿ ಮಹಿಳೆಯರಿಗೆ ಈ ಸೌಲಭ್ಯ ಸಿಗಲಿದೆ.


ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ನೇಮಕಗೊಂಡ ಆಂತರಿಕ ಸಮಿತಿ ಮಾತ್ರ ಈ ವಿಶೇಷ ರಜೆಯನ್ನ ಶಿಫಾರಸು ಮಾಡುವ ಅಧಿಕಾರ ಹೊಂದಿರುತ್ತದೆ.

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಗೆ ನೀಡಲಾಗುವ ಈ ರಜೆಯನ್ನ ಅವರ ಉದ್ಯೋಗದ ರಜೆ ಖಾತೆಯಿಂದ ಕಡಿತಗೊಳಿಸಲಾಗುವುದಿಲ್ಲ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ತಿಳಿಸಿದೆ,

ನಾಗರೀಕ ಸೇವೆಗಳ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವ ಸಚಿವಾಲಯ, ಲೈಂಗಿಕ ಕಿರುಕುಳ ಪ್ರಕರಣಗಳ ವಿಚಾರಣೆಯನ್ನ 30 ದಿನದೊಳಗೆ ಮುಗಿಸಬೇಕು ಮತ್ತು ಈ ಅವಧಿಯಲ್ಲಿ ಸಂತ್ರಸ್ತೆಗೆ 90 ದಿನ ರಜೆ ಪಡೆಯಲು ಅನುವು ಮಾಡಿಕೊಟ್ಟಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ