Select Your Language

Notifications

webdunia
webdunia
webdunia
webdunia

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

LPG Cylinder
ನವದೆಹಲಿ: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆಯಾಗಿದೆ ಎಂಬ ವರದಿಗಳ ಬೆನ್ನಲ್ಲೇ ಈಗ ಕೇಂದ್ರವೇ ಸ್ಪಷ್ಟನೆ ನೀಡಿದ್ದು ನಿಯಮದಲ್ಲಿ ಬದಲಾವಣೆಯಿಲ್ಲ ಎಂದಿದೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ವಾತಾವರಣದಿಂದ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ದೇಶದಲ್ಲಿ ವಾಣಿಜ್ಯ ಮತ್ತು ಗೃಹ ಬಳಕೆ ಸಿಲಿಂಡರ್ ಗಳು ಮೊದಲಿನಂತೆ ಸಿಗುತ್ತಿಲ್ಲ. ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ನಿಯಮದಲ್ಲಿ ಬದಲಾವಣೆ ತಂದಿದೆ ಎಂದು ವರದಿಯಾಗಿತ್ತು.

ಇದರ ಬೆನ್ನಲ್ಲೇ ಈಗ ಇಂಡಿಯನ್ ಆಯಿಲ್ ಸ್ಪಷ್ಟನೆ ನೀಡಿದ್ದು ನಿಯಮದಲ್ಲಿ ಬದಲಾವಣೆಯಿಲ್ಲ. ತಪ್ಪಾಗಿ ವರದಿಯಾಗಿದ್ದು, ಸದ್ಯಕ್ಕೆ ಯಾವುದೇ ಬದಲಾವಣೆಯಿಲ್ಲ. ಬುಕಿಂಗ್ ಅವಧಿಯಲ್ಲೂ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಈ ಮೊದಲು 21 ದಿನಗಳ ಅಂತರದಲ್ಲಿ ಸಿಲಿಂಡರ್ ಬುಕಿಂಗ್ ಮಾಡಬಹುದಾಗಿತ್ತು. ಆದರೆ ಈಗ 35 ದಿನಕ್ಕೆ ಏರಿಕೆ ಮಾಡಲಾಗಿದೆ. ಅಂದರೆ ಒಂದು ಸಿಲಿಂಡರ್ ಬಳಿಕ ಮತ್ತೊಂದು ಸಿಲಿಂಡರ್ ಬುಕಿಂಗ್ ಮಾಡಲು 35 ದಿನ ಕಾಯಬೇಕು ಎಂದು ವರದಿಯಾಗಿತ್ತು. ಇದರ ಬೆನ್ನಲ್ಲೇ ಜನ ಆತಂಕಕ್ಕೀಡಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿಲಿಂಡರ್ ಬುಕಿಂಗ್ ವಿಚಾರದಲ್ಲಿ ಹೊಸ ನಿಯಮ ಜಾರಿಗೆ ತಂದೆ ಕೇಂದ್ರ ಸರ್ಕಾರ: ತಪ್ಪದೇ ಗಮನಿಸಿ