Publish Date: Fri, 24 Jul 2026 (16:33 IST)
Updated Date: Fri, 24 Jul 2026 (16:43 IST)
ನವದೆಹಲಿ: ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರಮಖ ಬೇಡಿಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ. ಇದೀಗ ಶಿಕ್ಷಣ ಸಚಿವರ ರಾಜೀನಾಮೆಗೆ ಕೇಂದ್ರ ನಾಳೆಯವರೆಗೆ ಸಮಯ ಕೇಳಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿಯೇ ಎಂಬ ಸೂಚನೆ ಕಂಡುಬಂದಿದೆ.
ಕಳೆದ ಒಂದು ವಾರದಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಪಾರ್ಟಿ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ದೇಶದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ಇಂದು ಕಾಕ್ರೋಚ್ ಪಕ್ಷದ ವಕ್ತಾರ ಸೌರವ್ ದಾಸ್ ನೇತೃತ್ವದ ನಿಯೋಗ ಎರಡನೇ ಬಾರಿಗೆ ಕೇಂದ್ರ ಸಚಿವ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಜೊತೆ ಮಾತುಕತೆ ನಡೆಸಿದೆ.
ಈ ವೇಳೆ ತಮ್ಮ ಪ್ರಮುಖ ಬೇಡಿಕೆಯನ್ನು ಸಚಿವರ ಮುಂದಿಟ್ಟಿದ್ದಾರೆ. ಈ ಪೈಕಿ ಶಿಕ್ಷಣ ಸಚಿವರ ರಾಜೀನಾಮೆಗೆ ಕೇಂದ್ರ ನಾಳೆ ಮಧ್ಯಾಹ್ನದವರೆಗೆ ಸಮಯಾವಕಾಶ ಕೇಳಿದೆ ಎನ್ನಲಾಗಿದೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್, ತಾವು ಮುಂದಿಟ್ಟಿದ್ದ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಪ್ರಮುಖ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ. ನೀಟ್ ಅಕ್ರಮದ ಆಘಾತದಿಂದ ಹಾಗೂ ಪರೀಕ್ಷಾ ಒತ್ತಡದಿಂದ ಜೀವ ಕಳೆದುಕೊಂಡ ಅಮಾಯಕ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಧನ ನೀಡಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಪೊಲೀಸರು ದಾಖಲಿಸಿರುವ ಎಲ್ಲಾ ಎಫ್‌ಐಆರ್ (FIR) ಹಾಗೂ ಪ್ರಕರಣಗಳನ್ನು ಸಂಪೂರ್ಣವಾಗಿ ಹಿಂಪಡೆಯಲು ಸರ್ಕಾರ ಸಮ್ಮತಿಸಿದೆ ಎಂದಿದ್ದಾರೆ. ಇದೀಗ ಕೇಂದ್ರ ನಡೆ ಕುತೂಹಲ ಕೆರಳಿಸಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ