Daily Horoscope
✕

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ಕೃಷ್ಣವೇಣಿ ಕೆ
ಶುಕ್ರವಾರ, 24 ಜುಲೈ 2026 (16:33 IST)
ನವದೆಹಲಿ: ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರಮಖ ಬೇಡಿಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ. ಇದೀಗ ಶಿಕ್ಷಣ ಸಚಿವರ ರಾಜೀನಾಮೆಗೆ ಕೇಂದ್ರ ನಾಳೆಯವರೆಗೆ ಸಮಯ ಕೇಳಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿಯೇ ಎಂಬ ಸೂಚನೆ ಕಂಡುಬಂದಿದೆ.
 

ಕಳೆದ ಒಂದು ವಾರದಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಪಾರ್ಟಿ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ದೇಶದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ಇಂದು ಕಾಕ್ರೋಚ್ ಪಕ್ಷದ ವಕ್ತಾರ ಸೌರವ್ ದಾಸ್ ನೇತೃತ್ವದ ನಿಯೋಗ ಎರಡನೇ ಬಾರಿಗೆ ಕೇಂದ್ರ ಸಚಿವ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಜೊತೆ ಮಾತುಕತೆ ನಡೆಸಿದೆ.

ಈ ವೇಳೆ ತಮ್ಮ ಪ್ರಮುಖ ಬೇಡಿಕೆಯನ್ನು ಸಚಿವರ ಮುಂದಿಟ್ಟಿದ್ದಾರೆ. ಈ ಪೈಕಿ ಶಿಕ್ಷಣ ಸಚಿವರ ರಾಜೀನಾಮೆಗೆ ಕೇಂದ್ರ ನಾಳೆ ಮಧ್ಯಾಹ್ನದವರೆಗೆ ಸಮಯಾವಕಾಶ ಕೇಳಿದೆ ಎನ್ನಲಾಗಿದೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್, ತಾವು ಮುಂದಿಟ್ಟಿದ್ದ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಪ್ರಮುಖ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.  ನೀಟ್ ಅಕ್ರಮದ ಆಘಾತದಿಂದ ಹಾಗೂ ಪರೀಕ್ಷಾ ಒತ್ತಡದಿಂದ ಜೀವ ಕಳೆದುಕೊಂಡ ಅಮಾಯಕ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಧನ ನೀಡಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಪೊಲೀಸರು ದಾಖಲಿಸಿರುವ ಎಲ್ಲಾ ಎಫ್‌ಐಆರ್ (FIR) ಹಾಗೂ ಪ್ರಕರಣಗಳನ್ನು ಸಂಪೂರ್ಣವಾಗಿ ಹಿಂಪಡೆಯಲು ಸರ್ಕಾರ ಸಮ್ಮತಿಸಿದೆ ಎಂದಿದ್ದಾರೆ. ಇದೀಗ ಕೇಂದ್ರ ನಡೆ ಕುತೂಹಲ ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments