Webdunia - Bharat's app for daily news and videos

Install App

ಕೇರಳದ 'ಚಮಯವಿಳಕ್ಕು' ಉತ್ಸವದಲ್ಲಿ ಕಾಲ್ತುಳಿತ: ಐದು ವರ್ಷದ ಬಾಲಕಿ ಸಾವು

Sampriya
ಸೋಮವಾರ, 25 ಮಾರ್ಚ್ 2024 (15:38 IST)
Photo Courtesy
ಕೇರಳ:  ಇಲ್ಲಿನ ಕೊಲ್ಲಂ ಜಿಲ್ಲೆಯ ಕೊಟ್ಟನ್‌ಕುಲಂಗರ ದೇವಿ ದೇವಸ್ಥಾನದ 'ಚಮಯವಿಳಕ್ಕು' ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕಿ ಗಾಯಗೊಂಡು ಸಾವನ್ನಪ್ಪಿದ್ದಾಳೆ.

ನಿನ್ನೆ ರಾತ್ರಿ ನಡೆದ  ರಥೋತ್ಸವದ ವೇಳೆ ಮೃತ ಬಾಲಕಿ ತನ್ನ ತಂದೆಯ  ತೋಳಿನಿಂದ ಕೆಳಗಡೆ ಬಿದ್ದದ್ದಾಳೆ. ಈ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದಳು.

ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಮೃತ ಬಾಲಕಿಯನ್ನು ರಮೇಶ್‌ ಹಾಗೂ ಜಿಜಿ ಪುತ್ರಿ ಎಂದು ಗುರುತಿಸಲಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ (ಕುಸಾಟ್) ಉತ್ಸವದಲ್ಲಿ ನೂಕುನುಗ್ಗಲು ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು ಸುಮಾರು 60 ವಿದ್ಯಾರ್ಥಿಗಳು ಗಾಯಗೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments