Select Your Language

Notifications

webdunia
webdunia
webdunia
webdunia

ಆಂಧ್ರಪ್ರದೇಶದಲ್ಲಿ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ ಪ್ರಮಾಣವಚನ

Chandrababu Naidu

Sampriya

ಹೈದರಾಬಾದ್‌ , ಮಂಗಳವಾರ, 11 ಜೂನ್ 2024 (16:42 IST)
Photo Courtesy X
ಹೈದರಾಬಾದ್‌: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಬೆಳಿಗ್ಗೆ 11.27ಕ್ಕೆ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಇಂದು ನಡೆದ ಎನ್‌ಡಿಎ ಮೈತ್ರಿಪಕ್ಷಗಳ ಶಾಸಕರ ಸಭೆಯಲ್ಲೂ ನಾಯ್ಡು ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನಾಯಕರನ್ನು ಒಳಗೊಂಡ ಎನ್‌ಡಿಎ ಬಣದ ನಾಯಕರು ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಇತರ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ‌ನಾಯ್ಡು ಅವರೊಂದಿಗೆ ಟಿಡಿಪಿ ಪ್ರಧಾನ ಕಾರ್ಯದರ್ಶಿ, ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಸೇರಿದಂತೆ ಜನಸೇನಾ ಪಕ್ಷದ ನಾಯಕ ಪವಣ್ ಕಲ್ಯಾಣ್, ಎನ್. ಮನೋಹರ್ ಸೇರಿದಂತೆ ಹಲವು ನಾಯಕರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ.

ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಲೋಕಸಭೆಯಲ್ಲಿ ಜೂನ್​​ 20ರಂದು ಬಹುಮತ ಸಾಬೀತು ಸಾಧ್ಯತೆ