Select Your Language

Notifications

webdunia
webdunia
webdunia
webdunia

ಚಂದ್ರಯಾನ-3 : ಇಸ್ರೋಗೆ ನಾಸಾ ಆಡಳಿತಾಧಿಕಾರಿ ಅಭಿನಂದನೆ

ಚಂದ್ರಯಾನ-3 : ಇಸ್ರೋಗೆ ನಾಸಾ ಆಡಳಿತಾಧಿಕಾರಿ ಅಭಿನಂದನೆ
ಬೆಂಗಳೂರು , ಗುರುವಾರ, 24 ಆಗಸ್ಟ್ 2023 (08:32 IST)
ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರಯಾನ ಯಶಸ್ಸಿನ ಬಳಿಕ ನಾಸಾ ಆಡಳಿತಾಧಿಕಾರಿ ಬಿಲ್ ನಲ್ಸೆನ್  ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
 
ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

ಸಂಜೆ 6:04ರ ಹೊತ್ತಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ಪ್ರತಿಯೊಬ್ಬ ಭಾರತೀಯ ಪ್ರಜೆ ಹೆಮ್ಮೆ ಪಡುವ ಕ್ಷಣ ಇದಾಗಿದೆ. ಈ ಕುರಿತು ನಾಸಾ ಆಡಳಿತಾಧಿಕಾರಿ ಬಿಲ್ ನಲ್ಸೆನ್ ಟ್ವೀಟ್ ಮಾಡಿ ಇಸ್ರೋ ತಂಡಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.   

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರದ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ: ಡಿ.ವೈ ಚಂದ್ರಚೂಡ್