Select Your Language

Notifications

webdunia
webdunia
webdunia
webdunia

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆ: ಸೋನಿಯಾ, ರಾಹುಲ್‌ ಗಾಂಧಿಗೆ ಕಾದಿದ್ಯಾ ಸಂಕಷ್ಟ

National Herald case, Rahul Gandhi, Sonia Gandhi

Sampriya

ನವದೆಹಲಿ , ಮಂಗಳವಾರ, 15 ಏಪ್ರಿಲ್ 2025 (20:24 IST)
Photo Courtesy X
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದ್ದು, ಕಾಂಗ್ರೆಸ್‌ನ ಹೈಕಮಾಂಡ್‌ ನಾಯಕರಿಗೆ ಆಘಾತ ನೀಡಿದೆ.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಇಡಿ  ಆರೋಪಪಟ್ಟಿ ಸಲ್ಲಿಸಿದೆ. ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾದಂತಾಗಿದೆ.  

ಈ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಸೋನಿಯಾಗಾಂಧಿ ಎ-1 ಹಾಗೂ ರಾಹುಲ್ ಗಾಂಧಿ ಎ-2 ಆಗಿದ್ದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಕೋರ್ಟ್‌ ಏ.25ಕ್ಕೆ ಮುಂದಿನ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ.

ಒಟ್ಟು 700 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಜಾರಿ ನಿರ್ದೇಶನಾಲಯ ಮುಂದಾಗಿದ್ದು ದೆಹಲಿ, ಮುಂಬೈನ ಬಾಂದ್ರಾ ಪ್ರದೇಶ ಮತ್ತು ಲಕ್ನೋದ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡದಲ್ಲಿರುವ ಆಸ್ತಿಗಳ ಮೇಲೆ ನೋಟಿಸ್‌ಗಳನ್ನು ಅಂಟಿಸಲಾಗಿದೆ. ಇವುಗಳಲ್ಲಿ ದೆಹಲಿಯ ಬಹದ್ದೂರ್ ಶಾ ಜಾಫರ್ ಮಾರ್ಗದಲ್ಲಿರುವ ಪ್ರತಿಷ್ಠಿತ ನ್ಯಾಷನಲ್ ಹೆರಾಲ್ಡ್ ಹೌಸ್ ಕೂಡ ಸೇರಿದೆ.  

ಇಡಿ 2021 ರಲ್ಲಿ ತನಿಖೆ ಆರಂಭಿಸಿತ್ತು. ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಜೂನ್ 2014 ರಲ್ಲಿ ನೀಡಿದ ಆದೇಶದ ಆಧಾರದ ಮೇಲೆ ತನಿಖೆಯನ್ನು ಇಡಿ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಗಾಳಿ ಮಳೆಗೆ ಮುರಿದು ಬಿತ್ತು ವಿಷ್ಣಮೂರ್ತಿ ದೇವಸ್ಥಾನದ ಧ್ವಜಸ್ತಂಭ