Publish Date: Thu, 27 Oct 2022 (11:34 IST)
Updated Date: Thu, 27 Oct 2022 (11:26 IST)
ಮುಂಬೈ : ಕೆಮಿಕಲ್ ಕಂಪನಿಯೊಂದರ ಬಾಯ್ಲರ್ ಸ್ಫೋಟಗೊಂಡು ಭಾರೀ ಬೆಂಕಿ ಉದ್ಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಬುಧವಾರ ನಡೆದಿದೆ.
ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿರುವ ರಾಸಾಯನಿಕ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 12 ಜನರಿಗೆ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ.