Select Your Language

Notifications

webdunia
webdunia
webdunia
webdunia

ಛತ್ತೀಸ್‌ಗಢ: ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವು, 12ಮಂದಿಗೆ ಗಾಯ

Road Accident, Chhattisgarh, Deadly Road Accident

Sampriya

ರಾಯ್‌ಪುರ , ಗುರುವಾರ, 6 ಮಾರ್ಚ್ 2025 (19:25 IST)
ರಾಯ್‌ಪುರ: ಛತ್ತೀಸ್‌ಗಢದ ರಾಯ್‌ಪುರದ ಹೊರವಲಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮಂದಿರ್ ಹಸೌದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ರಾಯ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಲಾಲ್ ಉಮೇದ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇಂದು ಮುಂಜಾನೆ, ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಮೂವರು ಸಾವನ್ನಪ್ಪಿದ್ದು, ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.

ಈ ಘಟನೆ ಬುಧವಾರ ಸಂಜೆ ಸುಮಾರು 8.10 ಗಂಟೆಗೆ ಸಂಭವಿಸಿದೆ. ಒಟ್ಟು ಮೃತರಲ್ಲಿ ಇಬ್ಬರು ಪುರುಷರು, ಮತ್ತೊಬ್ಬರು ಮಹಿಳೆ.

ಗಾಯಗೊಂಡವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. 12 ಗಾಯಾಳುಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆಯ ನಂತರ ನಾರಾಯಣಪುರ ಆಸ್ಪತ್ರೆಗೆ ಕಳುಹಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ತೇಜಸ್ವಿ ಸೂರ್ಯರನ್ನು ಕೈಹಿಡಿದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಫ್ಯಾಮಿಲಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗುತ್ತೆ